ಮುಲ್ಕಿ : ಫೇಮಸ್ ಯೂತ್ ಕ್ಲಬ್ (ರಿ)ಮತ್ತು ಮಹಿಳಾ ಮಂಡಲ 10ನೇ ತೋಕೂರು ಇದರ ಆಶ್ರಯದಲ್ಲಿ ತೋಕೂರು ಗುತ್ತು ಹೊಸಮನೆ ಕಲ್ಲಾಪು ದಿವಂಗತ ಶ್ರೀ ಗುಣಪಾಲ ಶೆಟ್ಟಿ ಮತ್ತು ಶ್ರೀಮತಿ ಶಕುಂತಲಾ ಶೆಟ್ಟಿಯವರ ಸ್ಮರಣಾರ್ಥ ಅವರ ಮಕ್ಕಳು ಮತ್ತು ಕುಟುಂಬಸ್ಥರು 10ನೇ ತೋಕೂರು ಗ್ರಾಮದ ಸುಬ್ರಮಣ್ಯ ನಗರದಲ್ಲಿ ನೂತನ ಬಸ್ಸು ತಂಗುದಾಣವನ್ನು ಕೊಡುಗೆಯಾಗಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು 24.12.2023 ರಂದು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತೋಕೂರು ಗುತ್ತು ಹೊಸ ಮನೆ ಕಲ್ಲಾಪು ಕುಟುಂಬದ ಸದಸ್ಯರಾದ ಶ್ರೀ ಕೃಶಾಲ್ ಶೆಟ್ಟಿ ಶಿಲನ್ಯಾಸ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ದಿವಾಕರ ಕರ್ಕೇರ, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಯೋಗೀಶ್ ಮತ್ತು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.








