ಮಂಗಳೂರು ಸಿಟಿಯಲ್ಲೂ ಮೊಳಗಿದ ಕಂಬಳ ಕಹಳೆ… ಹೌದು, ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯ ಒಳಗೆ ಕೃತಕವಾಗಿ ರೂಪಿಸಿದ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ಎರಡು ದಿನಗಳ ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದ ‘ಮಂಗಳೂರು ಕಂಬಳ’ಕ್ಕೆ ಇಂದು ಚಾಲನೆ ದೊರೆತಿದೆ.
ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಕಂಬಳಕ್ಕೆ ಚಾಲನೆ ನೀಡಿದ್ದು, ಇವರಿಗೆ ರಾಮಕೃಷ್ಠ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದ ಜೀ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ. ಮಂಗಳೂರು ಉತ್ತರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಸಾಥ್ ನೀಡಿದ್ರು.
ಬಳಿಕ ದಿ| ರತ್ನ ಮಾಧವ ಶೆಟ್ಟಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಇದರ ಅಧ್ಯಕ್ಷರಾದ ಕೆ.ಚಿತ್ತರಂಜನ್ ಉದ್ಘಾಟಿಸಿದ್ದಾರೆ. ಅಧ್ಯಕ್ಷತೆರಯನ್ನು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ. ತುಕಾರಾಮ ಪೂಜಾರಿ ಅವರು ವಹಿಸಿದ್ರು.
ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅನಂತಪದ್ಮನಾಭ ಅಸ್ರಣ್ಣ ಅವರು ಆಶೀರ್ವಚನ ನೀಡಿ, ಭವಿಷ್ಯ ಜೀವನ ಉಜ್ಜಲವಾಗಲು, ದೇಹದ ಆರೋಗ್ಯಕ್ಕೆ ಕ್ರೀಡೆ ಅಗತ್ಯ. ಕರೆಗೆ ತುಂಬಾ ಸುಂದರವಾದ ರಾಮಲಕ್ಷö್ಮಣ ಎಂಬ ಹೆಸರು ಇಟ್ಟಿದ್ದು, ಉತ್ತಮ ವಿಚಾರವಾಗಿದೆ. ಕ್ರೀಡಾಪಟುವಿನ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ ಒಂದು ಉತ್ತಮ ವೇದಿಕೆ ಅಂತ ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…