ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.
ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೋಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.
ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.
ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಘಟನೆಬಳಿಕ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…