ಉಡುಪಿ: ಉಡುಪಿಯ ಪ್ರತಿಷ್ಠಿತ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಮಳಿಗೆಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾದ ಪಿಸ್ತೂಲಿನ ವಾರಿಸುದಾರರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದೊಂದು ಪರವಾನಿಗೆ ಹೊಂದಿದ ಪಿಸ್ತೂಲ್ ಎಂದು ತಿಳಿದುಬಂದಿದೆ.
ಮಂಗಳೂರಿನ ಜಯಪ್ರಕಾಶ್ ಎಂಬವರಿಗೆ ಸೇರಿದ ಪಿಸ್ತೂಲ್ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇವರು ಬಟ್ಟೆ ಮಳಿಗೆಯ ಮೊದಲನೇ ಮಹಡಿಯ ಪುರುಷರ ಶೌಚಾಲಯದ ಬಳಿ ಪಿಸ್ತೂಲನ್ನು ಮರೆತು ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಸ್ವಚ್ಛತಾ ಸಿಬ್ಬಂದಿಯೋರ್ವರಿಗೆ ಪಿಸ್ತೂಲ್ ಸಿಕ್ಕಿದ್ದು, ಇನ್ನೋರ್ವ ಸಿಬ್ಬಂದಿ ಪರೀಕ್ಷಿಸಲು ಪಡೆದುಕೊಂಡು ಕಾಕ್ ಮಾಡಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಟ್ರಿಗರ್ ಕೈ ತಾಗಿದಾಗ ಗುಂಡು ಸಿಡಿದು ಇನ್ನೊಬ್ಬ ಸಿಬ್ಬಂದಿಯ ಎಡಕೈ ತೋಳಿಗೆ ಗಾಯವಾಗಿತ್ತು. ಪಿಸ್ತೂಲ್ ಬಿಟ್ಟು ಹೋದ ಜಯಪ್ರಕಾಶ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…