ಉಡುಪಿ: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಉಡುಪಿ ಕಲ್ಲೂರು ನಿವಾಸಿ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ. ಇವರು ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…