ನಿಟ್ಟೆ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಅಫ್ ಟೆಕ್ನಾಲಜಿಯ ಸುಮಾರು 21000 ಸದಸ್ಯರಿದ್ದ ಹಳೆ ವಿದ್ಯಾರ್ಥಿ ಸಂಘ- Wenamitaa ಇದರ 2023-25 ಸಾಲಿನ ನೂತನ ಅಧ್ಯಕ್ಷರಾಗಿ ಮೂಲ್ಕಿ ಜೀವನ್ ಕೆ. ಶೆಟ್ಟಿ ಯವರು ಡಿ. 30 ರಂದು ನಿಟ್ಟೆ ಸಂಸ್ಥೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಇವರು 1996 ರಲ್ಲಿ Bachelor in Civil Engineer(B.E.) ಹಾಗೂ 2015ರಲ್ಲಿ Master of Construction Technology (M.Tech) ನಲ್ಲಿ ಪದವಿ ಪಡೆದಿರುತ್ತಾರೆ. ಶ್ರೀಯುತರು 1996ರಿಂದ 1998ರವರೆಗೆ NRAM ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ (ACEM) ನ ಸ್ಥಾಪಕಾಧ್ಯಕ್ಷರಾಗಿ, ಇಂಡಿಯನ್ ರೋಡ್ ಕಾಂಗ್ರೆಸ್(IRC) ನವದೆಹಲಿ ಇದರ ಖಾಯಂ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ್ ಚಿಪ್ಲೋಂಕರ್, ಡೈರೆಕ್ಟರ್ ಗಳಾದ ಶ್ರೀ ಯೋಗೀಶ್ ಹೆಗ್ಡೆ, ಶ್ರೀ ಪ್ರಸನ್ನ ಕೈಲಾಜೆ, ಸಂಯೋಜಕರಾದ ಪ್ರೊ. ಜ್ಞಾನೇಶ್ವರ ಪೈ ಮತ್ತು ಹಲವಾರು ಹಳೆವಿದ್ಯಾರ್ಥಿಗಳು ದೇಶ ವಿದೇಶಗಳಿಂದ ಈ ಸಂದರ್ಭದಲ್ಲಿ ಹಾಜರಿದ್ದರು. ನಿಕಟಪೂರ್ವ ಅಧ್ಯಕ್ಷೆ ಪ್ರೊ. ಪ್ರಭಾ ನಿರಂಜನ್ ಅಧಿಕಾರವನ್ನು ಹಸ್ತಾಂತರಿಸಿದರು. ಉಪಾಧ್ಯಕ್ಷರಾಗಿ ಅವಿನಾಶ್ ಕೃಷ್ಣಕುಮಾರ್, ಕಾರ್ಯದರ್ಶಿಯಾಗಿ ರಂಜಿತ್ ಭಟ್, ಜೊತೆ ಕಾರ್ಯದರ್ಶಿಯಾಗಿ ಶರತ್ ಮತ್ತು ಖಜಾಂಚಿಯಾಗಿ ಡಾ. ಹರ್ಷಿತಾ ಜತ್ತಣ್ಣ ಇವರು ಆಯ್ಕೆಯಾಗಿರುತ್ತಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…