ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಪಿಂಚಣಿ ದಿನ ಆಚರಣೆ ಕಾರ್ಯಕ್ರಮ


ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯ, ಬೆಂಗಳೂರು ಇವರು ಹಮ್ಮಿಕೊಂಡ ಯೋಜನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪಿಂಚಣಿ ಕುಂದು ಕೊರತೆಗಳನ್ನು ನೋಂದಾಯಿಸಲು ಮತ್ತು ಪಿಂಚಣಿ ಕುರಿತಾದ ಮಾಹಿತಿ ನೀಡಲು ಬಂಟ್ವಾಳ ತಾಲೂಕು ಕಂದಾಯ ಇಲಾಖೆಯಿಂದ ಶನಿವಾರ ಗೋಳ್ತಮಜಲು ಗ್ರಾಮದಲ್ಲಿ “ಪಿಂಚಣಿ ದಿನ” ಆಚರಿಸಲಾಯಿತು.

ಗೋಳ್ತಮಜಲು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಪ್ರೇಮ ಅವರು ಇಂತಹ ಯೋಜನೆಗಳಿಂದ ಬಡವರಾದ ಅಸಹಾಯಕ ವ್ಯಕ್ತಿಗಳಿಗೆ ಬಹಳಷ್ಟು ನೆರವು ದೊರೆಯುತ್ತದೆ. ಅಧಿಕಾರಿಗಳೇ ಫಲಾನುಭವಿಗಳ ಬಳಿಗೆ ಬಂದು ಪಿಂಚಣಿ ದಿನಾಚರಣೆಯನ್ನು ಆಚರಿಸುವುದು ಬಹಳ ಅರ್ಥಪೂರ್ಣವಾಗಿದೆ. ಇದರಿಂದ ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತದೆ ಎಂದರು.

ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಜಯಂತ ಗೌಡ ಮಕ್ಕಾರು, ಕಂದಾಯ ಇಲಾಖೆಯ ಉಪತಹಶೀಲ್ದಾರರಾದ ದಿವಾಕರ ಮುಗುಳಿಯ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕರಾದ ವಿಜಯ್‌ ಆರ್. ಗ್ರಾಮ ಆಡಳಿತ ಅಧಿಕಾರಿ ಶಿಲ್ಪಾ ಜನಾರ್ಧನ್‌, ತಾಲೂಕು ಕಚೇರಿ ಸಿಬ್ಬಂದಿ ವೆಂಕಟರಮಣ ಗ್ರಾಮ ಸಹಾಯಕರಾದ ಮೋಹನ್ ದಾಸ್ ಕೊಟ್ಟಾರಿ,ಸಂಜೀವ ಮಂಚಿ, ಸದಾನಂದ ಪುದು, ವಿಠಲ ಬಡಗಬೆಳ್ಳೂರು ಉಪಸ್ಥಿತರಿದ್ದರು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ವಿಜಯ ಶಂಕರ್‌ ಆಳ್ವ ಸ್ವಾಗತಿಸಿ, ವಂದಿಸಿದರು. ಫಲಾನುಭವಿಗಳು ಅದಾಲತ್‌ ನ ಸದುಪಯೋಗ ಪಡೆದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!