ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಪತಿ ಮುಗಿಸಿದ್ದು, ಬಟ್ಟೆ ಧರಿಸುವ ವಿಚಾರ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. ಜೀವನ್, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.
ಶನಿವಾರ ಸಂಜೆಯು ಸಹ ಮಾಡ್ರನ್ ಡ್ರೆಸ್ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಎಸ್ಕೇಪ್ ಆಗಿದ್ದಾನೆ. ಹಾಸನದ ಜೀವನ್ ಹಾಗೂ ಧಾರವಾಡದ ಜ್ಯೋತಿ ಅವರು ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಜ್ಯೋತಿ ಅವರು ಮಾಡರ್ನ್ ಉಡುಪುಗಳನ್ನು ಧರಿಸುವುದು ಜೀವನ್‌ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು. ಜೀವನ್ ಆಕ್ಷೇಪಕ್ಕೆ ಜ್ಯೋತಿ ಸೊಪ್ಪು ಹಾಕುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…