ಬಂಟ್ವಾಳ ಜ.2ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳಿದರು.
ಅವರು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಏರ್ಪಡಿಸಿದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಮಾತನಾಡಿ ಶಿಕ್ಷಕರು ಸ್ವ ಮೌಲ್ಯಮಾಪನ ಮಾಡಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಮೇಲ್ಪಂಕ್ತಿಯಾಗಬೇಕು ಎಂದು ತಿಳಿಸಿದರು.
ಗ್ರಾ.ಪಂ ಅಧ್ಯಕ್ಷ ವಿಠಲ ಬಾಳ್ತಿಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗುರುಗಳು ಮಕ್ಕಳಿಗೆ ಮಾತ್ರವಲ್ಲದೆ ಸಮಾಜಕ್ಕೂ ಮಾರ್ಗದರ್ಶಕರಾಗಬೇಕೆಂದರು. ಮಾಣಿ ವಲಯ ಸಿಆರ್ಪಿ ಸತೀಶ ರಾವ್ ಉದ್ಘಾಟಿಸಿದರು. ಬಂಟ್ವಾಳ ಸಿಆರ್ಪಿ ನಂದಾ ಎಸ್ತೇರ ಶುಭ ಹಾರೈಸಿದರು.
ಕುದ್ರೆಬೆಟ್ಟು ಶಾಲೆಯ ಮುಖ್ಯ ಶಿಕ್ಷಕಿ ದೇವಿಕಾ ಸ್ವಾಗತಿಸಿದರು. ಮಮತಾ ಶೆಟ್ಟಿ ವಂದಿಸಿದರು. ಅಮಿತ ಕುದ್ರೆಬೆಟ್ಟು ನಿರೂಪಿಸಿದರು. ಶಿಕ್ಷಕರಾದ ಜಯರಾಮ ಪಡ್ರೆ, ಜಯಲಕ್ಮಿ ಶೇರಾ, ಅಮೋಘ ಅನಂತಾಡಿ, ಸಚಿನ್ ಮಂಡ್ಯ ಅಭಿಪ್ರಾಯ ವ್ಯಕ್ತ ಪಡಿಸಿದರು. ಬಂಟ್ವಾಳ ನಗರ , ಬಾಳ್ತಿಲ , ಮಾಣಿ, ಕಡೇಶ್ವಾಲ್ಯ ,ಕೆದಿಲ ವಲಯಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…