ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ

ಮಂಗಳೂರು : ಅಧಿಕ ಜನರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸೊಂದು ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ. ಆದಿ ಲಕ್ಷ್ಮೀ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆಡಿಕ್ಕಿ ಹೊಡೆದು ಉರುಳಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ಕೈಕಂಬದಿಂದ ಬಿ. ಸಿ. ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನು ಸಂಜೆ ವೇಳೆಯಾಗಿದ್ದರಿಂದ ಬಸ್‌ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಬಸ್ ಚಲಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಬಸ್ ಪಲ್ಟಿಯಾದ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!