ಮಂಗಳೂರು : ಅಧಿಕ ಜನರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸೊಂದು ಪಲ್ಟಿಯಾಗಿರುವ ಘಟನೆ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ನಡೆದಿದೆ. ಆದಿ ಲಕ್ಷ್ಮೀ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಬ್ರೇಕ್ ಫೇಲ್ ಆದ ಕಾರಣ ಡಿವೈಡರ್ ಗೆಡಿಕ್ಕಿ ಹೊಡೆದು ಉರುಳಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಾಗಳಾಗಿದ್ದು, ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ಕೈಕಂಬದಿಂದ ಬಿ. ಸಿ. ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಸಂಜೆ ವೇಳೆಯಾಗಿದ್ದರಿಂದ ಬಸ್‌ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಬಸ್ ಚಲಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಬಸ್ ಪಲ್ಟಿಯಾದ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…