ಜನ ಮನದ ನಾಡಿ ಮಿಡಿತ

Advertisement

ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ ಸ್ಪೆಕ್ಟರ್ ರಿಂದ ಸಖತ್ ಕ್ಲಾಸ್

ಹೊಸ ವರ್ಷಾಚರಣೆಯ ಸಂದರ್ಭ ರಸ್ತೆಯಲ್ಲಿ ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ಮಣಿಪಾಲ ಪೊಲೀಸರು ಹಲವು ಯುವಕರನ್ನು ವಾಹನ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.


ಡಿ.31ರಂದು ಮಧ್ಯರಾತ್ರಿ ವೇಳೆ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಕಾಯಿನ್ ಸರ್ಕಲ್ ನಡುವಿನ ವಿ.ಎಸ್.ಆಚಾರ್ಯ ರಸ್ತೆಯಲ್ಲಿ 7 ರಿಂದ 10 ಜನರು ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿಕೊಂಡಿದ್ದು, ಬುಲೆಟ್ ಸವಾರ ಸೈಲೆನ್ಸರ್‌ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿಕೊಂಡಿದ್ದರು.
ಅದೇ ರೀತಿ ವಿವಿಧ ಸವಾರರರು ರಸ್ತೆಯ ಮಧ್ಯದಲ್ಲಿ ವಾಹನಗಳನ್ನು ನಿಲ್ಲಿಸಿ ಬೊಬ್ಬೆಯೊಡೆದು ಕುಣಿದು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟು ಮಾಡಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿರುರುವುದಾಗಿ ದೂರಲಾಗಿದೆ.
ಈ ಮಾಹಿತಿಯಂತೆ ಸ್ಥಳಕ್ಕೆ ತೆರಳಿದ ಮಣಿಪಾಲ ಪೊಲೀಸರು ಯುವಕರನ್ನು ವಾಹನ ಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಪುಂಡಾಟ ಮೆರೆದ ಯುವಕರಿಗೆ ಮಣಿಪಾಲ ಸರ್ಕಲ್ ಇನ್ಸಫೆಕ್ಟರ್ ದೇವರಾಜ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!