ಉಡುಪಿ:ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯೊಬ್ಬರು ಎರ್ರಾಬಿರ್ರಿಯಾಗಿ ಟ್ರಾವೆಲರ್ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.
ಉಡುಪಿ ಡಿ.ಎ.ಆರ್ ವಿಭಾಗದ ಪೊಲೀಸ್ ಪೇದೆ ಪ್ರಶಾಂತ್ ಎಂಬವರೇ ಬೇಕಾಬಿಟ್ಟಿ ವಾಹನ ಚಲಾಯಿಸಿದ ಚಾಲಕ. ಕಾರ್ಯಕ್ರಮದ ನಿಮಿತ್ತ ಬಂದೋಬಸ್ತಿಗಾಗಿ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಪ್ರಶಾಂತ್ ಕುಡಿದ ಮತ್ತಿನಲ್ಲಿ ಇಲಾಖೆಗೆ ಸೇರಿದ ಸರಕಾರಿ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಆಟೋ, ಬೈಕ್ ಸಹಿತ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಇನ್ನು ಡಿ.ಎ.ಆರ್ ವಿಭಾಗದ ಸಿಬ್ಬಂದಿಯ ವರ್ತನೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…