ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾ ನಡೆಯಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿ.ಕೆ. ಹರಿಪ್ರಸಾದ್ ಅಂಥ ಘಟನೆಯಾಗಲಿದೆ ಅನ್ನೋದಕ್ಕೆ ನನ್ನ ಬಳಿ ಮಾಹಿತಿ ಇದೆ ಎಂದಿದ್ದಾರೆ. ಆ ಮೂಲಕ ಅಂದು ಕರಸೇವೆ ಮಾಡಿ ವಾಪಾಸಾಗುತ್ತಿದ್ದ ವೇಳೆ ಪೆಟ್ರೋಲ್ ಬಾಂಬ್ ಎಸೆದಿರೋದನ್ನು ನೆನೆಪಿಸಿದ್ದಾರೆ. ಗೋದ್ರಾದಂಥ ಘಟನೆ ರಾಜ್ಯದಲ್ಲಿ ಅಥವಾ ದೇಶದಲ್ಲಿ ನಡೆದರೆ ನೇರವಾಗಿ ಕಾಂಗ್ರೆಸ್ ಕಾರಣವಾಗುತ್ತೆ ಎಂದಿದ್ದಾರೆ.
ಈ ಹೇಳಿಕೆಯ ಹಿಂದೆ ಕಾಂಗ್ರೆಸ್ ಬಹುದೊಡ್ಡ ಪಿತೂರಿ ಮಾಡಿದೆ. 2002ರಲ್ಲಿ ಗೋದ್ರಾದಲ್ಲಿ ಭೋಗಿಗೆ ಬೆಂಕಿ ಹಚ್ಚಿದ ಘಟನೆ ಮತ್ತು ಶ್ರೀರಾಮ ಕಾಲ್ಪನಿಕ ಎನ್ನುವಂಥ ಕಾಂಗ್ರೆಸ್ ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಗೋದ್ರಾದ ಘಟನೆ ಹೇಳುತ್ತಾ ಜನರಲ್ಲಿ ಭಯ ಮೂಡಿಸುವ ಷಡ್ಯಂತ್ರ ಮಾಡಿದೆ. ಇಂಥ ಘಟನೆ ನಡೆಯುತ್ತೆ ಮತ್ತು ಅದಕ್ಕೆ ಆಧಾರ ಇದೆ ಎಂದು ಹೇಳಿದ ಹರಿಪ್ರಸಾದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಕಾರ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…