ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿಯಲ್ಲಿ ರಾಮಭಕ್ತರ ಬಂಧನ ಖಂಡಿಸಿ, ಬಿ.ಸಿ.ರೋಡಿನಲ್ಲಿ ಹಿಂ.ಜಾ.ವೇ ವತಿಯಿಂದ ಬೃಹತ್ ಪ್ರತಿಭಟನೆ…!!

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೋಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲಾ ಸಂಯೋಜನಕ್ ನರಸಿಂಹ ಮಾಣಿ , ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಸಭೆಯಲ್ಲಿ ಮಾತನಾಡಿದರು ‌.
ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳು ಕೇಳಿ ಬಂದವು.
ಹಿಂದೂ ಕಾರ್ಯಕರ್ತ ಶ್ರೀಕಾಂತ್ ಸಹಿತ ಕಾರ್ಯಕರ್ತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಿ ಎಂದು ಆಗ್ರಹ ಮಾಡಿದರು.


ಬಿಡುಗಡೆ ಮಾಡುವ ಕೆಲಸ ಮಾಡದೆ ಮತ್ತೆ ಮತ್ತೆ ಹಿಂದೂ ಕಾರ್ಯಕರ್ತರನ್ನು ಕೆಣಕಲು ಹೋದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು‌
ಅಯೋಧ್ಯೆಯ ಸಂಭ್ರಮದಲ್ಲಿರುವ ಹಿಂದೂ ಸಮಾಜದ ಮೇಲೆ ಸಿದ್ದರಾಮಯ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು.
ಪ್ರತಿ ಬಾರಿ ಹಿಂದೂ ಸಮಾಜದ ಮೇಲೆ ನಡೆಯುವ ದಾಳಿಯನ್ನು ಖಂಡಿಸುತ್ತೇವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಪ್ರಮುಖರಾದ ಸಮಿತ್ ರಾಜ್ ಧರೆಗುಡ್ಡೆ, ಅರುಣ್ ಸಜೀಪ, ಗಣೇಶ್ ಕುಲಾಲ್ ಕೆದಿಲ, ದಿನೇಶ್ ದಂಬೆದಾರ್, ಪ್ರಭಾಕರ್ ಪ್ರಭು, ರವಿರಾಜ್ ಬಿಸಿರೋಡು, ರಮಾನಾಥ ರಾಯಿ,ಹರೀಶ್ ತಲೆಂಬಿಲ, ರವಿ‌ಕೆಂಪುಗುಡ್ಡೆ, ಪ್ರಶಾಂತ್ ಇರಾ, ಪ್ರಶಾಂತ್ ಕೆಂಪುಗುಡ್ಡೆ, ಶೇಖರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!