ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೋಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾ ಸಂಯೋಜನಕ್ ನರಸಿಂಹ ಮಾಣಿ , ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ ಸಭೆಯಲ್ಲಿ ಮಾತನಾಡಿದರು .
ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳು ಕೇಳಿ ಬಂದವು.
ಹಿಂದೂ ಕಾರ್ಯಕರ್ತ ಶ್ರೀಕಾಂತ್ ಸಹಿತ ಕಾರ್ಯಕರ್ತರನ್ನು ಶೀಘ್ರವಾಗಿ ಬಿಡುಗಡೆಗೊಳಿಸಿ ಎಂದು ಆಗ್ರಹ ಮಾಡಿದರು.
ಬಿಡುಗಡೆ ಮಾಡುವ ಕೆಲಸ ಮಾಡದೆ ಮತ್ತೆ ಮತ್ತೆ ಹಿಂದೂ ಕಾರ್ಯಕರ್ತರನ್ನು ಕೆಣಕಲು ಹೋದರೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು
ಅಯೋಧ್ಯೆಯ ಸಂಭ್ರಮದಲ್ಲಿರುವ ಹಿಂದೂ ಸಮಾಜದ ಮೇಲೆ ಸಿದ್ದರಾಮಯ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪ ಮಾಡಿದರು.
ಪ್ರತಿ ಬಾರಿ ಹಿಂದೂ ಸಮಾಜದ ಮೇಲೆ ನಡೆಯುವ ದಾಳಿಯನ್ನು ಖಂಡಿಸುತ್ತೇವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಪ್ರಮುಖರಾದ ಸಮಿತ್ ರಾಜ್ ಧರೆಗುಡ್ಡೆ, ಅರುಣ್ ಸಜೀಪ, ಗಣೇಶ್ ಕುಲಾಲ್ ಕೆದಿಲ, ದಿನೇಶ್ ದಂಬೆದಾರ್, ಪ್ರಭಾಕರ್ ಪ್ರಭು, ರವಿರಾಜ್ ಬಿಸಿರೋಡು, ರಮಾನಾಥ ರಾಯಿ,ಹರೀಶ್ ತಲೆಂಬಿಲ, ರವಿಕೆಂಪುಗುಡ್ಡೆ, ಪ್ರಶಾಂತ್ ಇರಾ, ಪ್ರಶಾಂತ್ ಕೆಂಪುಗುಡ್ಡೆ, ಶೇಖರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…