ಸುಳ್ಯ ಪದವಿನ ಕನ್ನಡ್ಕದಲ್ಲಿ ಭಾನುವಾರ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಡುವನ್ನೂರು ಗ್ರಾಮದ ಕನ್ನಡ ಕಜೆಮೂಲೆ ನಿವಾಸಿ ಚಂದ್ರಶೇಖರ್ ಗೌಡರ ಮಗಳು ದೀಕ್ಷಾ (16ವರ್ಷ) ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಆತ್ಮಹತ್ಯೆ ಹಿಂದಿನ ಕಾರಣ ತಿಳಿದಬಂದಿಲ್ಲ.




