ಮುಲ್ಕಿ: ದೇಶ, ವಿದೇಶದಲ್ಲಿ ಉತ್ತಮ ಸಮಾಜ ಸೇವೆ ಮಾಡುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿ ಕೊಡುವ ಅನಿವಾಸಿ ಭಾರತೀಯರ ಸಾಧನೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ಮುಲ್ಕಿಯ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ ವಿದೇಶದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸುವ ಅನಿವಾಸಿ ಭಾರತೀಯ ಹಾಗೂ ಸಮಾಜ ಸೇವಕ ಶೇಕ್ ವಹೀದ್ ರವರನ್ನು ತಮ್ಮ ಆಶ್ರಮದ ವತಿಯಿಂದ ಗೌರವಿಸಿ ಮಾತನಾಡಿದರು. ಅವರು ಮಾತನಾಡಿ ಶೇಕ್ ವಹೀದ್ ರವರ ಸಮಾಜ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ ಗುರುಪ್ರಸಾದ್ ಭಟ್ ಮುಂಡ್ಕೂರು ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…