ಜನ ಮನದ ನಾಡಿ ಮಿಡಿತ

Advertisement

ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು..!!

ವಿಟ್ಲ: ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ್ದಾರೆ. ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು ಕಂಡು ಬಂದ ಕಾರಣಕ್ಕಾಗಿ ಮತ್ತೆ ಮುಖ್ಯಶಿಕ್ಷಕರ ಕೊಠಡಿಯೊಳಗೆ ನುಗ್ಗಿದ್ದಾರೆ.

ಮುಂದಿನ ತಿಂಗಳು ಉದ್ಘಾಟನೆಗೊಳ್ಳಲಿರುವ ಎರಡು ನೂತನ ಕೊಠಡಿಗಳಿಗೆ ಶಾಲಾ ಹಿತೈಷಿಗಳು, ದಾನಿಗಳು ನೀಡಿರುವ ಬೆಲೆಬಾಳುವ ವಸ್ತುಗಳು, ಟಿ.ವಿ.,ಕಂಪ್ಯೂಟರ್ ಗಳನ್ನು ಕಳವಿಗೆ ಯತ್ನಿಸಿದ್ದಾರೆ. ಆ ಸಂದರ್ಭ ಯಾವುದೋ ವಾಹನ ಅಥವಾ ಇನ್ನಿತರ ಶಬ್ದ ಕೇಳಿಸಿಕೊಂಡ ಕಳ್ಳರು ಸೊತ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಅಲ್ಲೇ ಬಿಟ್ಟು ಕಾಲ್ಕಿತ್ತಿರುವುದು ಕಂಡುಬಂದಿದೆ. ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ ಆರಂಭ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಮೋಹಲತಾ ಟೀಚರ್ ಅವರ ಗಮನಕ್ಕೆ ಕಳವು ಯತ್ನ ತಿಳಿದು ತಕ್ಷಣ ಎಸ್.ಡಿ.ಎಂ.ಸಿ ಅಧ್ಯಕ್ಷರ ಮೂಲಕ 112 ಪೊಲೀಸರಿಗೆ ಮಾಹಿತಿ ತಿಳಿಸಿ ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಶಿಕ್ಷಣ ಇಲಾಖೆಗೂ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಕಳ್ಳರ ಕಾಟ ಜಾಸ್ತಿಯಾಗುತ್ತಿದ್ದು ಆರು ತಿಂಗಳ ಮೊದಲು ಸ್ಥಳೀಯ ಶಾಲೆಯ ಹತ್ತಿರ ಇರುವ ಬ್ಯಾಂಕ್ ಕಳವಿಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೆ ಮತ್ತೆ ಶಾಲೆಗೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಪೊಲೀಸರ ಪರಿಶೀಲನೆ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಟೆಕ್ನಿಕ್ ಫಾರೂಕ್, ಸ್ಥಳೀಯ ಗ್ರಾ.ಪಂ.ಸದಸ್ಯ ಅರ್ಶದ್ ಕುಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಹಸೈನಾರ್ ತಾಳಿತ್ತನೂಜಿ, ಪಾರೂಕ್ ಬೊಣ್ಯಕುಕ್ಕು, ಮುಖ್ಯ ಶಿಕ್ಷಕರಾದ ಮೋಹಲತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!