ಉಡುಪಿ: ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತ ಸವಾರನನ್ನು ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಸ್ನೇಹಿತನೊಂದಿಗೆ ಸ್ಕೂಟರ್ ನಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ನಾಟಕ ನೋಡಲು ತೆರಳುತ್ತಿದ್ದರು. ಈ ವೇಳೆ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ರಸ್ತೆಗೆ ಉರುಳಿಬಿದ್ದಿದ್ದು, ಧನ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸ್ನೇಹಿತ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…