ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ಜನವರಿ 26ರವರೆಗೆ ನಡೆಯುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಪಲಿಮಾರು ಗ್ರಾಮ ಪಂಚಾಯತ್ ಬಳಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು. ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು. ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷ ರಾಯೇಶ್ ಪೈ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಮಂಗಳೂರು ನಬಾರ್ಡ್ ನ ಸಂಗೀತಾ ಕರ್ತ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿ ಕಿರಣ್ ಕುಮಾರ್, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಸಂತೋಷ್ ಶೆಟ್ಟಿ, ಉಡುಪಿ ಅಂಚೆ ಇಲಾಖೆಯ ಸಂತೋಷ್ ಮಧ್ಯಸ್ಥ ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…