ಬಂಟ್ವಾಳ: ಸರಕಾರಿ ಬಸ್ ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಗ್ಗ ದಲ್ಲಿ ನಡೆದಿದೆ.
ಅಲ್ಲಿಪಾದೆ ಪೆರಿಯಾರ್ ದೋಟ ಗೋಪಾಲ ಸಪಲ್ಯ ಅವರ ಮಗಳು ಪಲ್ಲವಿ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿ. ಕೆಳಗಿನ ವಗ್ಗ ತಿರುವಿನಲ್ಲಿ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಎರಡು ಬಸ್ ಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಮಾಡಿದೆ.
ಈ ಸಂದರ್ಭದಲ್ಲಿ ಬಂಟ್ವಾಳ ಕಡೆಯಿಂದ ವಾಮದಪದವು ಕಾಲೇಜಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಸ್ ಗಳೆರಡರ ಅಜಾಗರೂಕತೆಯಿಂದ ಸಂಚಾರಕ್ಕೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವಿದ್ಯಾರ್ಥಿನಿ ತಂದೆ ಗೋಪಾಲ ಸಪಲ್ಯ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…