ಮೂಡುಬಿದಿರೆ: ಮಹಾರಾಷ್ಟ್ರಗಡ್ಚಿರೋಲಿಯಲ್ಲಿ ನಡೆದ 69ನೇ ಮಹಿಳೆಯರ ಹಿರಿಯ ರಾಷ್ಟ್ರೀಯ
ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದು, ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 9ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.
ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ್ತಿಯರಿಗೆ ನೀಡುವ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್.ವೈ. ಮುಡಿಗೇರಿಸಿಕೊಂಡಿದ್ದಾರೆ.
ಕರ್ನಾಟಕ ತಂಡವು ಫೈನಲ್‌ನಲ್ಲಿ ತಮಿಳುನಾಡು ತಂಡವನ್ನು 35-29, ಅಂಕಗಳ ನೇರ ಸೆಟ್‌ಗಳಿಂದ ಮಣಿಸಿ, ಪ್ರಶಸ್ತಿಗೆ ಮುತ್ತಿಕ್ಕಿತ್ತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ 35-11, 35_16 ಅಂಕಗಳಿಂದ ಕೇರಳ ತಂಡಕ್ಕೆ ಸೋಲುಣಿಸಿತು. ವಿಜೇತ ಕರ್ನಾಟಕ ತಂಡ ಹಾಗೂ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಆಳ್ವಾಸ್ ಕಾಲೇಜಿನ ಆಟಗಾರ್ತಿಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…