ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ:ಸಹಕಾರಿ ರಂಗದ ಸಾಧಕ ಪಂಜದಗುತ್ತು ಶಾಂತರಾಮ ಶೆಟ್ಟಿ ರವರ ಸ್ಮರಣಾ ಕಾರ್ಯಕ್ರಮ

ಮುಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿ ಯ ಆಶ್ರಯದಲ್ಲಿ ಸಂಘದ ಸಭಾ ಭವನದಲ್ಲಿ ಸಂಘದ ಪ್ರೇರಣಾಶಕ್ತಿ, ಸಹಕಾರಿ ರಂಗದ ಸಾಧಕ ಪಂಜದಗುತ್ತು ಶಾಂತರಾಮ ಶೆಟ್ಟಿ ರವರ ಸ್ಮರಣಾ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಸಮಾಜ ಸೇವಕಿ,ಹಳೆಯಂಗಡಿಯ ಎಚ್. ಶಕುಂತಲಾ ಭಟ್ ಮಾತನಾಡಿ ದಿ. ಶಾಂತಾರಾಮ ಶೆಟ್ಟರು ಪಕ್ಷಿಕೆರೆ ಯಂತಹ ಕುಗ್ರಾಮದಲ್ಲಿ ಶಾಲೆ ತೆರೆದು ಸಾವಿರಾರು ಬಡ ಮಕ್ಕಳ ಶಿಕ್ಷಣಕ್ಕೆ ವಿದ್ಯಾದಾನದ ಮೂಲಕ ನೆರವಾಗಿದ್ದರು.. ಪ್ರತಿಯೊಂದು ಕ್ಷೇತ್ರದಲ್ಲಿ ಅವರ ಕೊಡುಗೆ ಅನನ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಸಂಘದ ಪ್ರೇರಣಾ ಶಕ್ತಿ ಪಂಜದಗತ್ತು ಶಾಂತರಾಮ ಶೆಟ್ಟರು ಸಹಕಾರಿ ಸಂಘದ ಭೀಷ್ಮರಾಗಿದ್ದರು. ಅವರ ಆದರ್ಶಗಳು ಸೊಸೈಟಿಗೆ ಮಾದರಿಯಾಗಿದ್ದು ಸಾಮಾಜಿಕ, ಶೈಕ್ಷಣಿಕ ,ಧಾರ್ಮಿಕ, ರಂಗಕ್ಕೆ ಅವರ ಕೊಡುಗೆ ಅನನ್ಯ ಅವರ ವ್ಯಕ್ತಿಯಲ್ಲ ಶಕ್ತಿಯಾಗಿದ್ದರು.
ಗ್ರಾಹಕರ ಬೆಂಬಲದಿಂದ ಶೀಘ್ರದಲ್ಲಿ ಕಿನ್ನಿಗೋಳಿಯಲ್ಲಿ ಪ್ರಿಯದರ್ಶಿನಿ ಕೊ-ಆಪರೇಟಿವ್ ಸೊಸೈಟಿಯ ಇನ್ನೊಂದು ಶಾಖೆ ಪ್ರಾರಂಭಿಸಲಾಗುವುದು
ಎಂದರು. ವೇದಿಕೆಯಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ,ಸವಿತಾ ಶಾಂತಾರಾಮ ಶೆಟ್ಟಿ,
ಸಂಘದ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!