ಕರಾವಳಿ

ಫೆಬ್ರವರಿ 6 ಕ್ಕೆ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮ

ಮಂಗಳೂರು: ಇದೆ ಬರುವ ಜನವರಿ 28 2024ನೇ ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 06, 2024 ರ ಮಂಗಳವಾರಕ್ಕೆ ಮುಂದೂಡಲ್ಪಟ್ಟಿದೆ.


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ ಇಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಸಕ್ತ ಸ್ಪರ್ಧೆಗಳಲ್ಲಿ ರಾಜ್ಯದ ಯಾವುದೇ ಸರಕಾರಿ, ಅನುದಾನಿತ, ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಮುಕ್ತ ಅವಕಾಶವಿದೆ. ಕಾಸರಗೋಡು ಸಹಿತ ಇತರ ಹೊರ ರಾಜ್ಯಗಳ ಶಾಲಾ ವಿದ್ಯಾರ್ಥಿಗಳಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು ಸ್ಪರ್ಧೆಯಲ್ಲಿ 6 ರಿಂದ 10 ನೇ ತರಗತಿಯೊಳಗಿನ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ.


ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಪ್ರಸಕ್ತ ವರ್ಷದಿಂದ ದ.ಕ ಜಿಲ್ಲೆಯ ಒಟ್ಟು 38 ಶಾಲೆಗಳಲ್ಲಿ ಉಚಿತವಾಗಿ ಯಕ್ಷಶಿಕ್ಷಣವನ್ನು ನೀಡುತ್ತಿದ್ದು ಸುಮಾರು 3,000 ವಿದ್ಯಾರ್ಥಿಗಳು ಯಕ್ಷಗಾನ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಆ ವಿದ್ಯಾರ್ಥಿಗಳಿಗೆ ಮತ್ತು ರಾಜ್ಯದ ಯಕ್ಷಗಾನಾಸಕ್ತ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶ ಸಹಿತ ಯಕ್ಷಗಾನ ಕಲೆಯಾಧಾರಿತ ಸ್ಪರ್ಧೆ ಇದಾಗಿದ್ದು ಎಲ್ಲ ಸ್ಪರ್ಧೆಗಳು ಕನ್ನಡ ಭಾಷಾ ಮಾಧ್ಯಮದಲ್ಲಿ ನಡೆಯಲಿದೆ.
“ಯಕ್ಷರೂಪಕ‌” ಸ್ಪರ್ಧೆಯಲ್ಲಿ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯಡಿ ಬರುವ ಶಾಲೆಯ ತಂಡಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದ್ದು ಉಳಿದ ಸ್ಪರ್ಧೆಗಳಲ್ಲಿ ಬೇರೆಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದೆ.


ಪ್ರಸಕ್ತ ಯಕ್ಷಗಾನ ಸ್ಪರ್ಧೆಗಳಲ್ಲಿ ಯಕ್ಷರೂಪಕ ಸ್ಪರ್ಧೆ (ಯಕ್ಷಗಾನದ ವೇಷಭೂಷಣ ಧರಿಸಿ ಯಕ್ಷಗಾನೀಯ ನಾಟ್ಯದೊಂದಿಗೆ ಯಾವುದೇ ಆಖ್ಯಾನಗಳನ್ನು ಪ್ರಸ್ತುತಪಡಿಸಬಹುದಾದ ಸ್ಪರ್ಧೆ), ಯಕ್ಷ ರಸಪ್ರಶ್ನೆ (ಯಕ್ಷಗಾನ ಕಲೆಗೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ), ಯಕ್ಷಜ್ಞಾನ ಪರೀಕ್ಷಾ ಪಂಥ (ಸ್ಪರ್ಧಾ ಸ್ಥಳದಲ್ಲಿ ತೋರಿಸುವ ಯಕ್ಷಗಾನ ಕಲೆಗೆ ಸಂಬಂಧಿಸಿದ ಪರಿಕರಗಳನ್ನು ಗಮನಿಸಿ ಆ ಬಳಿಕ ನೆನಪಿಸಿ ಗುರುತಿಸುವ ಸ್ಪರ್ಧೆ), ಯಕ್ಷ ಸ್ವಗತ ಮಾತುಗಾರಿಕೆ ಸ್ಪರ್ಧೆ (ಯಕ್ಷಗಾನದಲ್ಲಿ ಬರುವ ಯಾವುದೇ ಪಾತ್ರಗಳ ಪೀಠಿಕೆ ಅಥವಾ ಸ್ವಗತ ಮಾತನಾಡುವ ಸ್ಪರ್ಧೆ) ಯಕ್ಷಲೇಖನ ಸ್ಪರ್ಧೆ (ಯಕ್ಷಗಾನ ಕಲೆಗೆ ಸಂಬಂಧಿಸಿದ ಪ್ರಬಂಧ ಸ್ಪರ್ಧೆ), ಶ್ಲೋಕ ಕಂಠಪಾಠ ಸ್ಪರ್ಧೆ (ಸ್ಪರ್ಧಾ ಸ್ಥಳದಲ್ಲಿ ನೀಡುವ ಶ್ಲೋಕವನ್ನು ಕಂಠಪಾಠ ಮಾಡಿ ಹೇಳುವ ಸ್ಪರ್ಧೆ), ಯಕ್ಷರಂಗು ಮುಖವರ್ಣಿಕೆ ಸ್ಪರ್ಧೆ (ಯಕ್ಷಗಾನ ಬಣ್ಣಗಾರಿಕೆ- ಮುಖವರ್ಣಿಕೆಗೆ ಸಂಬಂಧಿಸಿದ ಸ್ಪರ್ಧೆ) ನಡೆಯಲಿದೆ.

ಯಕ್ಷ ಶಿಕ್ಷಣ ಯೋಜನೆಯ ಒಟ್ಟು 38 ಶಾಲೆಗಳ ಸುಮಾರು 42 ತಂಡಗಳ ನಡುವೆ ಎರಡು ವೇದಿಕೆಗಳಲ್ಲಿ ಯಕ್ಷರೂಪಕ ಸ್ಪರ್ಧೆಯು ನಡೆಯಲಿದ್ದು ಎರಡು ಪ್ರತ್ಯೇಕ ವೇದಿಕೆಗಳ ವಿಜೇತ ತಂಡಕ್ಕೆ ತಲಾ ಪ್ರಥಮ ತಂಡ ಪ್ರಶಸ್ತಿ (30,000/-) ದ್ವಿತೀಯ ತಂಡ ಪ್ರಶಸ್ತಿ (20,000/-) ತೃತೀಯ ತಂಡ ಪ್ರಶಸ್ತಿ (15,000/-) ಯನ್ನು ನೀಡಿ ಗೌರವಿಸಲಿದೆ. ಯಕ್ಷ ರೂಪಕದ ಶಿಸ್ತಿನ ತಂಡಕ್ಕೆ ಶಿಸ್ತಿನ ತಂಡ ಪ್ರಶಸ್ತಿ (10,000/-)ಯನ್ನು ನೀಡಲಿದೆ.
ಇತರ ವೈಯಕ್ತಿಕ ಮತ್ತು ತಂಡ ಸ್ಪರ್ಧೆಯಲ್ಲಿನ ವಿಜೇತ ವಿದ್ಯಾರ್ಥಿಗಳಿಗೆ, ಪ್ರಥಮ- 5,000/-, ದ್ವಿತೀಯ- 3,000/-ತೃತೀಯ- 2,000/- ರೂ ಸಹಿತ ಪ್ರಮಾಣ ಪತ್ರ ನೀಡಿ ಗೌರವಿಸಲಿದೆ. ಭಾಗವಹಿಸುವ ಸ್ಪರ್ಧಾಳುಗಳು ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಂದ ಪ್ರವೇಶ ಪತ್ರ ಹಾಗೂ ದೃಢೀಕರಣ ಪತ್ರ ಸಲ್ಲಿಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು 25-01-2024 ಕೊನೆಯ ದಿನಾಂಕವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಕದ್ರಿ ನವನೀತ ಶೆಟ್ಟಿ (9448123061) ದೀವಿತ್ ಎಸ್ ಕೆ ಪೆರಾಡಿ (9845109989) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

18 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

18 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

18 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

18 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

19 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago