ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ ಮಂಗಳೂರು,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ ಇವರುಗಳ ಮಾರ್ಗದರ್ಶನಲ್ಲಿ ಫೇಮಸ್ ಯೂತ್ ಕ್ಲಬ್(ರಿ) ಮತ್ತು ಫೇಮಸ್ ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಇವರ ಜಂಟಿ ಆಶ್ರಯದಲ್ಲಿ PM ವಿಶ್ವಕರ್ಮ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.
ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ
K.S.T.A ಪ್ರಧಾನ ಕಾರ್ಯದರ್ಶಿಯಾದ ಮೋಹನ್ ಎಸ್. ಕೋಡಿ ರವರು ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ಮಹಿಳಾ ಮಂಡಲದ ಅಧ್ಯಕ್ಷೆಯಾದ ಶ್ರೀಮತಿ ಪ್ರೇಮಲತಾ ಯೋಗೀಶ್, ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ದೇವಾಡಿಗ, ಫೇಮಸ್ ಯೂತ್ ಕ್ಲಬ್ಬಿನ ಉಪಾಧ್ಯಕ್ಷರಾದ ಭೋಜ ಕೋಟ್ಯಾನ್ ಕಾರ್ಯದರ್ಶಿ ಹಿಮಕರ್ ಕೋಟ್ಯಾನ್ ಮಹಿಳಾ ಮಂಡಲದ ಉಪಾಧ್ಯಕ್ಷರಾದ ಅಮಿತಾ ದಿನಕರ್ ಸಾಲಿಯಾನ್, ಕಾರ್ಯದರ್ಶಿ ಕುಸುಮ ಎಚ್ ಕೋಟ್ಯಾನ್, ಕೋಶಾಧಿಕಾರಿ ಶ್ರೀಮತಿ ಇಂದಿರಾ ಸಂಜೀವ ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀ ಹಿಮಕರ್ ಕೋಟ್ಯಾನ್ ನಿರೂಪಿಸಿದರು.
ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್‌ನ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…