ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.
ಅವರು ಇಂದು ಕಳಸದಲ್ಲಿರುವ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಚರ್ಚೆ ನಡೆಸಿದರು
ಉಡುಪಿಯಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದಾಗ ಮಾರ್ಗದ ಮಧ್ಯೆ ಕಳಸದಲ್ಲಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಚಿವರಿಗೆ ಅದ್ದೂರಿ ಸ್ವಾಗತ ನೀಡಿದರು. ಬಳಿಕ ಮಾತನಾಡಿದ ಸಚಿವರು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಆಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗುವಂತೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ ಎಂದು ಕರೆ ನೀಡಿದರು.
ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು. ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಯಾಣಿಕ, ಸ್ಥಳೀಯ ಮುಖಂಡರಾದ ವೀರೇಂದ್ರ, ಶಂಸುದ್ದೀನ್ ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…