ಬೆಂಗಳೂರಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮೈಲಸಂದ್ರ ಬಳಿಯ ಬುಲೆಟ್ ಹಾಗೂ ಬೊಲೆರೋ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಬುಲೆಟ್ ಸವಾರ ಧ್ರುವ (32) ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತೊಂದೆಡೆ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಶೇಖರ್ (40) ಮೃತಪಟ್ಟ ಹಿಂಬಂದಿ ಬೈಕ್ ಸವಾರ. ಇವರು ಗಾಲ್ಫ್ ಕ್ಲಬ್ನಲ್ಲಿ ಕೋಚ್ ಆಗಿ ಕೆಲಸ ಮಾಡ್ತಿದ್ದರು. ಸುಮನಹಳ್ಳಿ ಡಿಪೋ ಮುಂದೆ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.



