ಇಂದು ಇಲಕಲ್ ನಗರದ ಶ್ರೀ ಆಂಜನೇಯ ಗ್ರಾಮೀಣ ಅಭಿವೃದ್ಧಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ವಾಡ೯ ನಂ 04 ರಲ್ಲಿ ಪ್ರಭು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ರಾಮನ ಪೂಜೆಯನ್ನು ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಾಕ೯ಂಡೇಯ ಪಗಡೇಕಲ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸ್ಪಂದನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ರವಿ ಅರಸಿದ್ದಿ ಭಾಗವಹಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಶ್ರೀ ಆಂಜನೇಯ ಗ್ರಾಮೀಣ ಅಭಿವೃದ್ಧಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸರ್ವ ಸದಸ್ಯರು ಹಾಗೂ ಓಣಿಯ ಗುರು ಹಿರಿಯರು, ಮುದ್ದು ಮಕ್ಕಳು ಉಪಸ್ಥಿತರಿದ್ದರು.



