ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಾಂಗ್ರೆಸಿಗರು ಬಾಬರ್‌ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಪ್ರೀತಿಸುತ್ತಾರೆ: ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ

ಉಡುಪಿ: ಕಾಂಗ್ರೆಸಿಗರು ಬಾಬರ್‌ ಮತ್ತು ಅವನ ಸಂತಾನವನ್ನು ಅಪ್ಪನಿಗಿಂತ ಜಾಸ್ತಿ ಹೊತ್ತುಕೊಂಡಿದ್ದಾರೆ. ಬಾಬರ್‌ ಸಂತಾನವನ್ನು ಪ್ರೀತಿಸಿದಷ್ಟು ಅವರ ಅಪ್ಪನನ್ನು ಪ್ರೀತಿಸುತ್ತಾರೋ ಗೊತ್ತಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ರಾಮ ಹುಟ್ಟಿದ ಜಾಗದಷ್ಟೇ ಕೃಷ್ಣನ ಮಥುರಾ ಕೂಡ ನಮಗೆ ಪವಿತ್ರ. ಜ್ಞಾನ ವ್ಯಾಪಿಯ ನಂದಿ ಕಾಶಿಯ ಪುನರುತ್ಥಾನಕ್ಕೆ ಕಾಯುತ್ತಿದ್ದಾನೆ. ನಮ್ಮ ಕ್ಷೇತ್ರಗಳನ್ನು ಬಿಟ್ಟು ಕೊಡಿ, ಸನಾತನಿಗಳ ವಿರುದ್ದ ಮಾಡಿದ ಪಾಪ ನೀವು ಹೊತ್ತುಕೊಳ್ಳಬೇಡಿ. ಮಾಡಿದ ತಪ್ಪನ್ನು ಪ್ರಾಯಶ್ಚಿತ ಮಾಡಲು ಅವಕಾಶ ಇದೆ ಎಂದರು.
ರಾಮಮಂದಿರ ಮೂಲಕ ಪರಕೀಯರ ಆಕ್ರಮಣದಿಂದ ಕಳೆದುಕೊಂಡ ಸಾಂಸ್ಕೃತಿಕ ಬೀಜಾಂಕುರ ಆಗಿದೆ. ಬಾಬರ್ ಮತ್ತು ಅವನ ಸಂತಾನ ಓಲೈಸುವವರಿಗೂ ವೋಟ್‌ ಬ್ಯಾಂಕ್‌ ರಾಜಕೀಯದ ಅನಿವಾರ್ಯತೆ ಉಂಟಾಗಿದೆ. ರಾಮನನ್ನು ಬಿಟ್ಟರೆ ರಾಷ್ಟ್ರ ಇಲ್ಲ, ವೋಟ್ ಇಲ್ಲ ಎನ್ನುವುದು ಗೊತ್ತಾಗಿದೆ.
ರಾಮ ಕಾಲ್ಪನಿಕ ಎಂದವರು ಕೂಡ ರಾಮನಾಮ ಜಪ ಆರಂಭಿಸಿದ್ದಾರೆ. ಅತಿಕ್ರಮಣಕಾರರನ್ನು ಬಿಟ್ಟು ರಾಮಕೃಷ್ಣ ಶಿವನ ಜೊತೆ ಮುಸಲ್ಮಾನರು ಗುರುತಿಸಿಕೊಳ್ಳುತ್ತಿದ್ದಾರೆ. ಮುಸಲ್ಮಾನರ ಪೂಜಾ ಪದ್ದತಿಯನ್ನು ನಾವು ಪ್ರಶ್ನೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ 11 ದಿನ ಉಪವಾಸ ಮಾಡಿರೋದು ಡೌಟ್ ಎಂದಿರುವ ವೀರಪ್ಪ ಮೊಯ್ಲಿಗೆ ತೀಕ್ಷ್ಮವಾಗಿ ಕುಟುಕಿರುವ ರವಿ, ನಮಗೆ ವೀರಪ್ಪ ಮೊಯ್ಲಿಯ ಸರ್ಟಿಫಿಕೇಟ್ ಅವಶ್ಯಕತೆ ಇದೆಯಾ?. ರಾಮ ಕಾಲ್ಪನಿಕ ಎಂದು ಕಾಂಗ್ರೆಸಿಗರು ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದರು. ನಾನು ದೇವಸ್ಥಾನಕ್ಕೆ ಹೋಗಲ್ಲ, ಸಂವಿಧಾನ ಮುಖ್ಯ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಸಂವಿಧಾನ ನಮಗೂ ಮುಖ್ಯ.ಅದರ ಮೊದಲ ಪುಟದಲ್ಲೇ ರಾಮ ಇದ್ದಾನೆ ಎಂದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!