ದಕ್ಷಿಣ ಕನ್ನಡ: ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ಪತ್ರಕರ್ತ, ಪರಿಸರ ಸಂರಕ್ಷಣೆ ಮತ್ತು ಪ್ರಗತಿಪರ ಕೃಷಿಕ ಡಾ. ಮಂದಾರ ರಾಜೇಶ್ ಭಟ್ಟರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಇವರ ಮಾರ್ಗದರ್ಶನದಂತೆ ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಧಿಕೃತವಾಗಿ ಮಂದಾರ ರಾಜೇಶ್ ಭಟ್ಟರನ್ನು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ಉಪಾಧ್ಯಕ್ಷ ಎಂದು ಘೋಷಿಸಲಾಯಿತು.
ಮುಂದಿನ ತಿಂಗಳು ನಡೆಯಲಿರುವ ಜಾನಪದ ಉತ್ಸವ, ಹಾಗೂ ಜಾನಪದ ಪರಿಷತ್ತು ಕಾರ್ಯಕ್ರಮಗಳ ಹೆಚ್ಚಿನ ಪ್ರಸರಣಕ್ಕಾಗಿ, ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಹಾಗೂ ಹೆಚ್ಚಿನ ಕಾರ್ಯ ಕ್ಷಮತೆಯನ್ನು ಹೊಂದಲು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಗಳ ಕಾರ್ಯಕ್ಷಮತೆ ಪರಿಶೀಲನೆ ಮತ್ತು ಹೆಚ್ಚಿನ ಪ್ರೋತ್ಸಾಹ ನೀಡಲು ಬೆಂಗಳೂರು ಜಾನಪದ ಪರಿಷತ್ತು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ನಿರ್ಧರಿಸಿದ್ದು, ಅಗತ್ಯವಿದ್ದ ಹಲವು ತಾಲೂಕುಗಳಲ್ಲಿ ಬದಲಾವಣೆಯನ್ನು ಮಾಡಲಾಗಿದೆ. ಮೂಡಬಿದ್ರೆ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ನೂತನ ಸದಸ್ಯರನ್ನೊಳಗೊಂಡ ತಂಡ ರಚನೆಯಾಗಿದೆ.
ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಜಾನಪದ ಪರಿಷತ್ತು ಕೇಂದ್ರ ಸಮಿತಿ ಮುಖ್ಯಸ್ಥರುಗಳು, ಜಿಲ್ಲಾ ಸಮಿತಿ ಮುಖ್ಯಸ್ಥರುಗಳು, ತಾಲೂಕು ಸಮಿತಿ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…