ಬಂಟ್ವಾಳ: ಅಪರಿಚಿತ ವ್ಯಕ್ತಿಯೊರ್ವನ ಮೃತದೇಹದ ವಾರೀಸುದಾರರ ಗುರುತು ಪತ್ತೆಗಾಗಿ ಪೋಲೀಸ್ ಇಲಾಖೆ ಮಾಧ್ಯಮ ಮೂಲಕ ಮನವಿ ಮಾಡಿದೆ.
ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಆಸ್ಪತ್ರೆಯಲ್ಲಿ ಕೃಷ್ಣಪ್ಪ ಎಂಬವರು ಅನಾರೋಗ್ಯದ ನಿಮಿತ್ತ ಚಿಕಿತ್ಸೆ ಗಾಗಿ ದಾಖಲಾಗಿದ್ದರು.
ಆದರೆ ವಿಪರೀತ ಅಸ್ವಸ್ಥಗೊಂಡಿದ್ದ ಇವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಈತ ಜ.9 ರಂದು ಮೃತಪಟ್ಟ ಬಗ್ಗೆ ಅಲ್ಲಿನ ವೈದ್ಯರು ಪೋಲೀಸ್ ಇಲಾಖೆಗೆ ಮಾಹಿತಿ ನೀಡಿ ಶವಗಾರದಲ್ಲಿ ಇಡಲಾಗಿತ್ತು.
ಆದರೆ ಕೃಷ್ಣಪ್ಪ ಎಂದು ಹೆಸರು ಬಿಟ್ಟು ಯಾವುದೇ ವಿಳಾಸ ನೀಡದೆ ಆಸ್ಪತ್ರೆಗೆ ದಾಖಲಾದ ಕಾರಣ ಇವರ ಕುಟುಂಬದವರನ್ನು ಹುಡುಕುವುದು ಕಷ್ಟವಾಗಿದೆ.
ಹಾಗಾಗಿ ಇವರ ಗುರುತು ಪತ್ತೆಗಾಗಿ ಮಾಧ್ಯಮ ಮೂಲಕ ಮನವಿ ಮಾಡಿದೆ.
ಇವರ ಗುರುತು ಸಿಕ್ಕಿದರೆ ಬಂಟ್ವಾಳ ನಗರ ಪೋಲೀಸ್ ಠಾಣೆಯನ್ನು ಸಂಪರ್ಕ ಮಾಡುವಂತೆ ಎಸ್. ಐ.ರಾಮಕೃಷ್ಣ ಅವರು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…