ಜನ ಮನದ ನಾಡಿ ಮಿಡಿತ

Advertisement

ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆದ ಹೂಗಳ ಕಲಾಕೃತಿ

ಉಡುಪಿ: ಜಿಲ್ಲಾಡಳಿತ, ಜಿ. ಪಂ. ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ದೊಡ್ಡಣ್ಣಗುಡ್ಡೆಯಲ್ಲಿರುವ ತೋಟಗಾರಿಕೆ ಇಲಾಖೆ ಪುಷ್ಪ ಹರಾಜು ಕೇಂದ್ರದಲ್ಲಿ ಜನವರಿ28ರ ವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ರಚಿಸಿರುವ ಹೂಗಳ ಕಲಾಕೃತಿಗಳು ಸೌಂದರ್ಯ ಪ್ರಿಯರ ಕಣ್ಮನ ಸೆಳೆಯುತ್ತಿವೆ.


ಶುಕ್ರವಾರದಿಂದ ಆರಂಭಗೊಂಡ ಫಲಪುಷ್ಪ ಪ್ರದರ್ಶನದ ಮೊದಲ ದಿನವೇ ಸ್ಥಳೀಯ ಸಹಿತ ದೂರದ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಹೂ, ಹೂವಿನ ಸಸ್ಯ, ಕಲಾಕೃತಿಗಳನ್ನು ಕಣ್ಣುಂಬಿಕೊಂಡರು.
5 ಸಾವಿರಕ್ಕೂ ಅಧಿಕ 30ಕ್ಕೂ ಅಧಿಕ ಜಾತಿಯ ಹೂವಿನ ಗಿಡಗಳಾದ ಪೆಟೂನಿಯ, ವರ್ಬೇನ, ಸ್ಯಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಚೈನಾ ಅಸ್ಟರ್‌ ಸೇರಿದಂತೆ ವಿವಿಧ ಜಾತಿಯ ಹೂವಿನ ಗಿಡಗಳು ಪಾತಿ, ಕುಂಡಗಳಲ್ಲಿ ಪ್ರದರ್ಶನದಲ್ಲಿವೆ. ರಾಗಿ ಮತ್ತು ಹೂವಿನಿಂದ ರೂಪಿಸಲಾದ ಅಯೋಧ್ಯೆ ರಾಮ ಮಂದಿರದ ಕಲಾಕೃತಿ ವಿಶೇಷ ಗಮನ ಸೆಳೆಯುತ್ತಿದೆ. ಇದರ ಜತೆಗೆ ನರ್ಸರಿ ಗಿಡಗಳು, ಕೃಷಿ ಸಂಬಂಧಿತ ಇಲಾಖೆಗಳಾದ ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಪಶುಸಂಗೋಪನೆ, ಕೈಗಾರಿಕೆ ವಾಣಿಜ್ಯ ಇಲಾಖೆ ವಸ್ತು ಪ್ರದರ್ಶನ ಮಳಿಗೆಯೂ ಪ್ರಮುಖವಾಗಿದೆ.ಪ್ರದರ್ಶನ ವೀಕ್ಷಿಸಲು ನೂರಾರು ಜನ ಇಲ್ಲಿಗೆ ಆಗಮಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!