ಉಡುಪಿ: ಜಿಲ್ಲಾಡಳಿತ, ಜಿ. ಪಂ. ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ದೊಡ್ಡಣ್ಣಗುಡ್ಡೆಯಲ್ಲಿರುವ ತೋಟಗಾರಿಕೆ ಇಲಾಖೆ ಪುಷ್ಪ ಹರಾಜು ಕೇಂದ್ರದಲ್ಲಿ ಜನವರಿ28ರ ವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ರಚಿಸಿರುವ ಹೂಗಳ ಕಲಾಕೃತಿಗಳು ಸೌಂದರ್ಯ ಪ್ರಿಯರ ಕಣ್ಮನ ಸೆಳೆಯುತ್ತಿವೆ.
ಶುಕ್ರವಾರದಿಂದ ಆರಂಭಗೊಂಡ ಫಲಪುಷ್ಪ ಪ್ರದರ್ಶನದ ಮೊದಲ ದಿನವೇ ಸ್ಥಳೀಯ ಸಹಿತ ದೂರದ ಊರುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಹೂ, ಹೂವಿನ ಸಸ್ಯ, ಕಲಾಕೃತಿಗಳನ್ನು ಕಣ್ಣುಂಬಿಕೊಂಡರು.
5 ಸಾವಿರಕ್ಕೂ ಅಧಿಕ 30ಕ್ಕೂ ಅಧಿಕ ಜಾತಿಯ ಹೂವಿನ ಗಿಡಗಳಾದ ಪೆಟೂನಿಯ, ವರ್ಬೇನ, ಸ್ಯಾಲ್ವಿಯ, ಸೇವಂತಿಗೆ, ಚೆಂಡು ಹೂ, ಜೀನಿಯಾ, ಚೈನಾ ಅಸ್ಟರ್ ಸೇರಿದಂತೆ ವಿವಿಧ ಜಾತಿಯ ಹೂವಿನ ಗಿಡಗಳು ಪಾತಿ, ಕುಂಡಗಳಲ್ಲಿ ಪ್ರದರ್ಶನದಲ್ಲಿವೆ. ರಾಗಿ ಮತ್ತು ಹೂವಿನಿಂದ ರೂಪಿಸಲಾದ ಅಯೋಧ್ಯೆ ರಾಮ ಮಂದಿರದ ಕಲಾಕೃತಿ ವಿಶೇಷ ಗಮನ ಸೆಳೆಯುತ್ತಿದೆ. ಇದರ ಜತೆಗೆ ನರ್ಸರಿ ಗಿಡಗಳು, ಕೃಷಿ ಸಂಬಂಧಿತ ಇಲಾಖೆಗಳಾದ ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಪಶುಸಂಗೋಪನೆ, ಕೈಗಾರಿಕೆ ವಾಣಿಜ್ಯ ಇಲಾಖೆ ವಸ್ತು ಪ್ರದರ್ಶನ ಮಳಿಗೆಯೂ ಪ್ರಮುಖವಾಗಿದೆ.ಪ್ರದರ್ಶನ ವೀಕ್ಷಿಸಲು ನೂರಾರು ಜನ ಇಲ್ಲಿಗೆ ಆಗಮಿಸುತ್ತಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…