ಉಡುಪಿ: ಅದಾನಿ ಫೌಂಡೇಶನ್ ಹಾಗೂ ಅದಾನಿ ಪವರ್ ಲಿಮಿಟೆಡ್ ಉಡುಪಿ ವತಿಯಿಂದ ಸ್ಥಾವರದ ಸುತ್ತಮುತ್ತಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಇಂದು ಪಡುಬಿದ್ರಿ ಬಂಟರ ಭವನದಲ್ಲಿ ವಿದ್ಯಾರ್ಥಿವೇತನ ವಿತರಣೆ ಮಾಡಲಾಯಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅದಾನಿ ಪವರ್ ಲಿಮಿಟೆಡ್ ಉಡುಪಿ ಅಧ್ಯಕ್ಷರಾದ ಕಿಶೋರ್ ಆಳ್ವ, ಪಡುಬಿದ್ರಿ ಬಂಟರ ಸಂಘದ ಸಿರಿಮುಡಿ ದತ್ತಿನಿಧಿ ಅಧ್ಯಕ್ಷರಾದ ಸಾಂತೂರು ಭಾಸ್ಕರ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಯೇಶ್ ಪೈ, ತೆಂಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…