ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಬಿ ಕೂಡಲಗಿ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಸೋಮವಾರ ಶಾಲು , ಸ್ಮರಣಿಕೆ ನೀಡಿ ಗೌರವಿಸಲಾಯಿತು‌.‌


ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹೊಸತನ್ನು ಕಲಿಯುವ ಛಲ ಮತ್ತು ಧೈರ್ಯ ಇದ್ದರೆ ಯಾವುದೇ ಕರ್ತವ್ಯವನ್ನಾದರೂ ಸುಲಭವಾಗಿ ನಿರ್ವಹಿಸಬಹುದು. ತಾಲೂಕು ಆಡಳಿತದ ಯಶಸ್ಸಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರು ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಅತ್ಯುತ್ತಮವಾದ ಸಹಕಾರ ನೀಡಿದ್ದರಿಂದಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಶೀಲ್ದಾರರಿಗೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು,
ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ಧನ ಜೆ,
ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.
ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!