ಬಂಟ್ವಾಳ: ಬಂಟ್ವಾಳ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಬಿ ಕೂಡಲಗಿ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ತಹಶೀಲ್ದಾರರಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಸೋಮವಾರ ಶಾಲು , ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಬಿ.ಸಿ. ರೋಡಿನಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೂತನ ತಹಶೀಲ್ದಾರ್ ಅರ್ಚನಾ ಭಟ್ ರವರು ಮಾತನಾಡಿ ಹೊಸತನ್ನು ಕಲಿಯುವ ಛಲ ಮತ್ತು ಧೈರ್ಯ ಇದ್ದರೆ ಯಾವುದೇ ಕರ್ತವ್ಯವನ್ನಾದರೂ ಸುಲಭವಾಗಿ ನಿರ್ವಹಿಸಬಹುದು. ತಾಲೂಕು ಆಡಳಿತದ ಯಶಸ್ಸಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಎಸ್ ಬಿ ಕೂಡಲಗಿ ಅವರು ಬಂಟ್ವಾಳ ತಾಲೂಕಿನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಅತ್ಯುತ್ತಮವಾದ ಸಹಕಾರ ನೀಡಿದ್ದರಿಂದಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು. ಬಂಟ್ವಾಳ ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ತಹಶೀಲ್ದಾರರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು,
ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ಧನ ಜೆ,
ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ವಿಟ್ಲ ಹೋಬಳಿ ಕಂದಾಯ ನಿರೀಕ್ಷಕರಾದ ಪ್ರಶಾಂತ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.
ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…