ಬಂಟ್ವಾಳ:14.01.2024 ರಂದು ಮೋಹನ್ ದಾಸ್ ಹಾಗೂ ಅವರ ಪತ್ನಿ ಶ್ವೇತಾ ಅವರು ನಂಬರ್ ಪ್ಲೇಟ್ ಇಲ್ಲದ ಮೋಟಾರ್ ಸೈಕಲಿನಲ್ಲಿ ದುಡುಕುತನ ಹಾಗೂ ನಿರ್ಲಕ್ಷತನದಿಂದ ತೆರಳುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಸಜಿಪ ಪಡು ಗ್ರಾಮದ ಕೋಟೆಕಣಿ ರಾಮ ಮಂದಿರದ ಬಳಿ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದರು. ಕೂಡಲೇ ಚಿಕಿತ್ಸೆಗಾಗಿ ಬಿ.ಸಿ ರೋಡ್ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.

ಆದ್ರೆ 15.01.2024 ರಂದು ಅಪಘಾತದಿಂದ ಗಾಯಗೊಂಡು ವಿಶ್ರಾಂತಿಯಲ್ಲಿದ್ದ ಮೋಹನ್ ದಾಸ್ ರವರಿಗೆ ಗಾಯಗಳು ಉಲ್ಬಣಗೊಂಡಿದ್ದರಿಂದ ಚಿಕಿತ್ಸೆಗಾಗಿ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ನೀಡಿದ ಸಲಹೆಯಂತೆ ಮಂಗಳೂರು ವೆನ್ ಲಾಕ್ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರು ಕೆ.ಎಂ.ಸಿ ಅತ್ತಾವರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಯ ವೈದ್ಯರು ಪರೀಕ್ಷಿಸಿ ಒಳ ರೋಗಿಯಾಗಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಿದ್ದಾರೆ.
ಆದ್ರೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದ ಮೋಹನ್ ದಾಸ್ ರವರು 29.01.2024 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ.
ಇನ್ನು ಈ ಬಗ್ಗೆ ಸಜಿಪನಡು ಗ್ರಾಮದ ಕೊಡಕಲ ನಿವಾಸಿ ಶೇಖರ ಅವರು ನೀಡಿದ ದೂರಿನ ಮೆರೆಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



