ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಎಂಜಿಎಂ ಮೈದಾನದಲ್ಲಿ ವಿದ್ಯಾರ್ಥಿಗೆ ಚೂರಿ ಇರಿತ

ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ. 29ರಂದು ಮಧ್ಯಾಹ್ನ ನಡೆದಿದೆ.


ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು. ಇದನ್ನು ನೋಡಿದ ಸುಹಾಸ್ ನು ಹೊಟ್ಟೆ ಕಿಚ್ಚಿನಿಂದ ನೀನು ಈ ಬೈಕ್ ನ್ನು ಕದ್ದಿದ್ದೀಯಾ ಎಂದು ಹಿಯಾಲಿಸಿದ್ದನು. ಜ. 29ರಂದು ಮಧ್ಯಾಹ್ನ ವೇಳೆ ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್‌, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇನ್ನೋರ್ವ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತೀಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!