ಉಡುಪಿ: ವಿದ್ಯಾರ್ಥಿಯೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಉಡುಪಿಯ ಎಂಜಿಎಂ ಮೈದಾನದಲ್ಲಿ ಜ. 29ರಂದು ಮಧ್ಯಾಹ್ನ ನಡೆದಿದೆ.
ಬ್ರಹ್ಮಾವರದ ಹೇರೂರಿನ ಪ್ರತೀಕ್ (17) ಹಲ್ಲೆಗೊಳಗಾದ ವಿದ್ಯಾರ್ಥಿ. ಇವರು ಉಡುಪಿಯ ಕೋಚಿಂಗ್ ಸೆಂಟರ್‌ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಅಲ್ಲಿ ಸುಹಾಸ್ ಎಂಬಾತ ಪರಿಚಯವಾಗಿತ್ತು. ಪ್ರತೀಕ್ ಒಂದುವರೆ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಿದ್ದರು. ಇದನ್ನು ನೋಡಿದ ಸುಹಾಸ್ ನು ಹೊಟ್ಟೆ ಕಿಚ್ಚಿನಿಂದ ನೀನು ಈ ಬೈಕ್ ನ್ನು ಕದ್ದಿದ್ದೀಯಾ ಎಂದು ಹಿಯಾಲಿಸಿದ್ದನು. ಜ. 29ರಂದು ಮಧ್ಯಾಹ್ನ ವೇಳೆ ಪ್ರತೀಕ್ ಅವರು, ಎಂಜಿಎಂ ಮೈದಾನಕ್ಕೆ ಹೋದಾಗ ಅಲ್ಲಿದ್ದ ಆರೋಪಿಗಳಾದ ಸುಹಾಸ್, ಮೋನೀಶ್, ತರುಣ್ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾರೆ. ಇನ್ನೋರ್ವ ಆರೋಪಿ ತರುಣ್ ಎಂಬಾತ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಪ್ರತೀಕ್ ಅವರ ಹೊಟ್ಟೆ ಹಾಗೂ ತೊಡೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತೀಕ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…