ಮುಲ್ಕಿ:ಬೆಂಗಳೂರಿನ ಅಂತಾರಾಷ್ಟ್ರೀಯ ವಾಸ್ತು ತಜ್ಞ,ಆಧ್ಯಾತ್ಮಿಕ ಗುರು, ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ಫೆ. 3ರಂದು ಮಂಗಳೂರಿಗೆ ಪತ್ನಿ ಸಮೇತ ಆಗಮಿಸಲಿದ್ದು ಕಿನ್ನಿಗೋಳಿ ಸಮೀಪದ ಇತಿಹಾಸ ಪ್ರಸಿದ್ಧ ಐಕಳ ಕಾಂತಾ ಬಾರೆ ಬೂತಾ ಬಾರೆ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಐಕಳ ಬಾವ ಡಾ. ದೇವಿ ಪ್ರಸಾದ್ ಶೆಟ್ಟಿ,ಬೆಳಪು ತಿಳಿಸಿದ್ದಾರೆ
ಅವರು ಮಾಧ್ಯಮದ ಜೊತೆ ಮಾತನಾಡಿ ಐಕಳಬಾವಾ ಕಂಬಳಕ್ಕೆ ಕಳೆದ ಹಲವು ದಶಕಗಳಿಂದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಚಾಲನೆ ನೀಡಿ, ವಿಶೇಷವಾಗಿ ಆಶೀರ್ವದಿಸಿಕೊಂಡು ಬರುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಕಂಬಳವೂ ಹೆಚ್ಚೆಚ್ಚು ಜನಪ್ರಿಯತೆ ಪಡೆದುಕೊಂಡು ಬರುತ್ತಿದೆ,
ಮೂಲತಃ ಮುಲ್ಕಿಯ ನಿವಾಸಿಯಾಗಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ದೇಶ ವಿದೇಶಗಳಲ್ಲಿ ಅಂತಾರಾಷ್ಟ್ರಿಯ ವಾಸ್ತು ಸಲಹೆಗಾರರಾಗಿ, ವೈಜ್ಞಾನಿಕ. ಜ್ಯೋತಿಷಿಯಾಗಿ
, ಆಧ್ಯಾತ್ಮಿಕ ಗುರುವಾಗಿ ಖ್ಯಾತಿ ಪಡೆದಿದ್ದಾರೆ. ಆದರೆ ಪ್ರತಿ ವರ್ಷ ಸುಮಾರು ಐಕಳ ಕಂಬಳಕ್ಕೆ ಚಾಲನೆ ನೀಡಲು ಕರಾವಳಿಗೆ ಬರುತ್ತಿರುವುದು ಅವರಿಗೆ ಕಂಬಳದ ಮೇಲಿರುವ ಪ್ರೀತಿಯ ಪ್ರತೀಕವಾಗಿದೆ.
ಸ್ವಾಮೀಜಿ ರವರು, ಕಂಬಳದ ಮಾರ್ಗದರ್ಶಕರಾಗಿದ್ದು, ಕರಾವಳಿ ಭಾಗದ ಸಾಂಪ್ರದಾಯಿಕ ಹಾಗೂ ಗ್ರಾಮೀಣ ಕ್ರೀಡೆಯಾದ ಕಂಬಳವನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದರು.
ಕಂಬಳೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಸ್ವಾಮೀಜಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೊಂದು ಪುಣ್ಯ ಕ್ಷೇತ್ರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮತ್ತೆ ಸಂಜೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಬೆಳಪು ಡಾ! ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…