ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಅನಂತಾಡಿಯಲ್ಲಿ ನರೇಗಾ ದಿವಸ ಆಚರಣೆ


ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್‌ಗಾರ್‌ ದಿನಾಚರಣೆ ನಡೆಯಿತು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್‌ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್‌ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.


ನರೇಗಾ ತಾಲೂಕು ಐಇಸಿ ಸಂಯೋಜಕ ರಾಜೇಶ್‌ ಮಾತನಾಡಿ, ನರೇಗಾ ಯೋಜನೆಯ ಆರಂಭ ಹಾಗೂ ಗ್ರಾಮಸ್ಥರು ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತಿಳಿಸಿದರು. ಅಮೃತ ಆರೋಗ್ಯ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್‌, ಆಯುಷ್ಮಾನ್‌ ಕಾರ್ಡ್‌ ಮಾಡಿಸಿಕೊಳ್ಳುವುದು, ಅದರಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಇದೇ ವೇಳೆ 2023-24ನೇ ಸಾಲಿನಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಂಡು 100 ಮಾನವದಿನಗಳನ್ನು ಪೂರೈಸಿದ ಫಲಾನುಭವಿ ಮಾಲತಿ ಅವರಿಗೆ ಸಸಿ ವಿತರಿಸಲಾಯಿತು. ” ಹಸಿರೇ ಉಸಿರು” ಧ್ಯೇಯದಡಿ ಗ್ರಾಮ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಶಿಕಲಾ, ಪುರಂದರಗೌಡ ಹಾಗೂ ಗ್ರಾಪಂ ಸಿಬ್ಬಂದಿ ಕುಶಾಲ್, ಲಿಂಗಪ್ಪ ಟಿ., ಹರಿಣಾಕ್ಷಿ, ಸೇವಂತಿಕ ರೈ, ಮಮತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಪ್ರೇಮಲತಾ ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!