ನರೇಗಾ ದಿವಸದ ಅಂಗವಾಗಿ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿಯಲ್ಲಿ ರೋಜ್‌ಗಾರ್ ದಿನಾಚರಣೆ ನಡೆಯಿತು.
ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ತಾಪಂ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ. ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅರ್ಜಿ ಸಲ್ಲಿಸಿ ಗ್ರಾಮದ ಅರ್ಹ ಫಲಾನುಭವಿಗಳು ಕಾಮಗಾರಿ ಕೈಗೊಳ್ಳಬೇಕು. ವರ್ಷದಲ್ಲಿ 100 ದಿನಗಳನ್ನು ಪೂರೈಸುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಬೇಕು. ಗ್ರಾಮ ಪಂಚಾಯತ್ ಕಾರ್ಯಕ್ರಮ, ಸಭೆಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಾದಂತೆ ಸರ್ಕಾರದ ಯೋಜನೆ ಮಾಹಿತಿಯನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನರೇಗಾ ತಾಲೂಕು ಐಇಸಿ ಸಂಯೋಜಕ ರಾಜೇಶ್ ಮಾತನಾಡಿ, ನರೇಗಾ ಯೋಜನೆಯ ಆರಂಭ ಹಾಗೂ ಗ್ರಾಮಸ್ಥರು ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತಿಳಿಸಿದರು. ಅಮೃತ ಆರೋಗ್ಯ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್, ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವುದು, ಅದರಿಂದ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ಇದೇ ವೇಳೆ 2023-24ನೇ ಸಾಲಿನಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಂಡು 100 ಮಾನವದಿನಗಳನ್ನು ಪೂರೈಸಿದ ಫಲಾನುಭವಿ ಮಾಲತಿ ಅವರಿಗೆ ಸಸಿ ವಿತರಿಸಲಾಯಿತು. ” ಹಸಿರೇ ಉಸಿರು” ಧ್ಯೇಯದಡಿ ಗ್ರಾಮ ಆವರಣದಲ್ಲಿ ಗಿಡ ನೆಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಶಿಕಲಾ, ಪುರಂದರಗೌಡ ಹಾಗೂ ಗ್ರಾಪಂ ಸಿಬ್ಬಂದಿ ಕುಶಾಲ್, ಲಿಂಗಪ್ಪ ಟಿ., ಹರಿಣಾಕ್ಷಿ, ಸೇವಂತಿಕ ರೈ, ಮಮತಾ, ಸಂಜೀವಿನಿ ಒಕ್ಕೂಟದ ಎಂಬಿಕೆ ಪ್ರೇಮಲತಾ ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…