ಕುಂದಾಪುರ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ದಶಮ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಆಯೋಜನೆಗೊಂಡ, ಸಮಗ್ರ ಕರ್ನಾಟಕ ಬಂಟರ ಸಮಾಗಮ “ಭಾವೈಕ್ಯ” ವಿನೂತನ ಕಾರ್ಯಕ್ರಮ 11 ಫೆಬ್ರವರಿ ಭಾನುವಾರ ಬೆಳಿಗ್ಗೆ 9.00 ಗಂಟೆಗೆ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಕ್ರೀಡಾಂಗಣ, ಯುವ ಮೆರಿಡಿಯನ್ ಸಂಕೀರ್ಣ ಕೋಟೇಶ್ವರದಲ್ಲಿ ನಡೆಯಲಿದೆ.
ಯುವ ಬಂಟರ ಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರಾದ ಡಾ! ನಿತ್ಯಾನಂದ ಅಂಪಾರು ಇವರ ಸಾರಥ್ಯದಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ‘ವಿದ್ಯಾದೀವಿಗೆ’ ಯೋಜನೆಯಡಿ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ‘ನವಚೇತನ’ ಯೋಜನೆಯಡಿ ವಿಶೇಷ ಚೇತನರಿಗೆ ಪ್ರೋತ್ಸಾಹಧನ, ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಬಂಟ ಯುವ ಸಾಧಕರಿಗೆ ಸನ್ಮಾನ, ಆಯುರ್ವೇದ ಚಿಕಿತ್ಸೆ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉಚಿತ ವಿಶೇಷ ಅರೋಗ್ಯ ತಪಾಸಣೆ, , ನಾಡಿನ ಜನಪ್ರಿಯ ಗಾಯಕ ಗಾಯಕಿಯರಾದ ರಾಜೇಶ್ ಕೃಷ್ಣನ್, ಎಂ. ಡಿ. ಪಲ್ಲವಿ, ಮಾನಸ ಹೊಳ್ಳ ಅವರಿಂದ ಸಂಗೀತ ಸಂಜೆ ನಡೆಯಲಿದೆ.
ಬೆಳಿಗ್ಗೆ 9.30 ಕ್ಕೆ ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ 11 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಎಂ.ಆರ್.ಜಿ ಸಮೂಹ ಉದ್ಯಮ ಸಂಸ್ಥೆಗಳು ಬೆಂಗಳೂರು ಇದರ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಕ್ಕೆ ಬಂಟರ ಸಾಂಸ್ಕೃತಿಕ ಸಂಭ್ರಮ, ರಾಷ್ಟ್ರಮಟ್ಟದ ಬಂಟರ ಸಮೂಹ ನೃತ್ಯ ಸ್ವರ್ಧೆಯನ್ನು ಬೆಂಗಳೂರು ಸೌತ್ ಫೀಲ್ಡ್ ಪೈಂಟ್ಸ್ ಆಡಳಿತ ನಿರ್ದೇಶಕ ಎಸ್. ಎಸ್. ಹೆಗ್ಡೆ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ 11 ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಎಂ.ಆರ್.ಜಿ ಸಮೂಹ ಉದ್ಯಮ ಸಂಸ್ಥೆಗಳು ಬೆಂಗಳೂರು ಇದರ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಹೇರಂಭ ಇಂಡಸ್ಟ್ರೀಸ್ ಮುಂಬೈ ಇದರ ಸಿಎಂಡಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಮುದಾಯದ ಹಿರಿಯ ಮುಖಂಡರಾದ ಬಿ. ಅಪ್ಪಣ್ಣ ಹೆಗ್ಡೆ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೈಸೂರು ಮರ್ಕಂಟೈಲ್ ಕಂ ಪ್ರೈ.ಲಿ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಎಚ್.ಎಸ್ ಶೆಟ್ಟಿ ಅವರನ್ನು ಅಭಿನಂದಿಸಲಿದ್ದಾರೆ. ಫಾರ್ಚ್ಯುನ್ ಗ್ರೂಪ್ ಆಫ್ ಹೊಟೇಲ್ಸ್ ದುಬಾಯಿ ಸಿಎಂಡಿ ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ದಶರಥ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ. ಸೌತ್ ಫೀಲ್ಡ್ ಪೈಂಟ್ಸ್ ಬೆಂಗಳೂರು ಆಡಳಿತ ನಿರ್ದೇಶಕರಾದ ಎಸ್.ಎಸ್. ಹೆಗ್ಡೆ ವಿದ್ಯಾ ದೀವಿಗೆಗೆ ಚಾಲನೆ ನೀಡಲಿದ್ದಾರೆ. ಮೆರಿಟ್ ಹಾಸ್ಪಿಟಾಲಿಟಿ ಮುಂಬಯಿ ಸಿಎಂಡಿ ಬೆಳ್ಳಾಡಿ ಅಶೋಕ್ ಶೆಟ್ಟಿ ನವಚೇತನಕ್ಕೆ ಚಾಲನೆ ನೀಡಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸಂಸ್ಥೆಯ ಡಾ. ಎಂ .ಮೋಹನ್ ಆಳ್ವ ಹಾಗು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಶುಭಾಶಂಸನೆಗೈಯಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…