ಹನುಮಗಿರಿಮೇಳದ ಕಲಾವಿದ ಶ್ರೀ ರೂಪೇಶ್ ಆಚಾರ್ಯ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ” ನೂತನ ಮನೆಯ ಕೀಲಿಕೈ ಹಸ್ತಾಂತರವು ಇಂದು ಬೆಳಿಗ್ಗೆ ಸಂಪ ನ್ನಗೊಂಡಿತು.
ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರು ಹಾಗೂ ನೂತನಮನೆಯ ನಿರ್ಮಾಣಕ್ಕೆ ಕಾರಣೀಕರ್ತರಾದ ದಾನಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಶ್ರೀ ಬೆಳ್ಳಾಡಿ ಅಶೋಕ್ ಶೆಟ್ಟಿಯವರು ಭಾಗವಹಿಸಿ ಶುಭಹಾರೈಸಿದರು. ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪೂವಪ್ಪ ಶೆಟ್ಟಿ ಅಳಿಕೆ ಹಾಗೂ ಪದಾಧಿಕಾರಿಗಳಾದ ಶ್ರೀ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.
ಮನೆಯವರ ವತಿಯಿಂದ ನಿರ್ಮಾತೃ ಶ್ರೀ ಅಶೋಕ್ ಶೆಟ್ಟಿ ಬೆಳ್ಳಾಡಿಯವರಿಗೆ ಹಾಗೂ ವಿಟ್ಲ ಘಟಕದ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಗೌರವ ಸಮರ್ಪಿಸಿದರು.ನಂತರ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರೀಯ ಘಟಕದ ವತಿಯಿಂದ ರೂಪೇಶ್ ಆಚಾರ್ಯ ಅವರ ಮನೆಯವರನ್ನು ಗೌರವಿಸಲಾಯಿತು.
ಬಡವರ ಕಣ್ಣೀರೊರಸಲು ಹೃದಯಪೂರ್ವಕ ಸಹಕರಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಶ್ರೀ ಬೆಳ್ಳಾಡಿ ಅಶೋಕ್ ಶೆಟ್ಟಿಯವರಿಗೆ ಹಾಗೂ ಶ್ಯಾಮಲಾ ಅಶೋಕ್ ಶೆಟ್ಟಿ ಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.), ಮಂಗಳೂರು, ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರುಗಳು
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…