ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಅವಧಿಯಲ್ಲಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಮೊದಲ ಹಂತದಲ್ಲಿ ನಡೆಯುವ ಲಕ್ಷ ಗೀತಾ ಲೇಖನಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಉತ್ತರಪ್ರದೇಶ ಮುಖ್ಯ ಮಂತ್ರಿಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ ನೀಡಲಾಯಿತು.
ಪುತ್ತಿಗೆ ಶ್ರೀಗಳ ಸೂಚನೆಯಂತೆ ಪರ್ಯಾಯ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಮಂಗಳವಾರ ಲಕ್ನೋದಲ್ಲಿ ಸಿಎಂ ಯೋಗಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಿಎಂ ಯೋಗಿ ಅವರು ಶ್ರೀಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕೋಟಿಗೀತಾ ಲೇಖನ ಯಜ್ಞವನ್ನು ಮುಕ್ತವಾಗಿ ಪ್ರಶಂಸಿಸಿ ತಮ್ಮನ್ನು ಆಹ್ವಾನಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಪೇಜಾವರ ಶ್ರೀಗಳ ಆಪ್ತರಾದ ವಾಸುದೇವ ಭಟ್ ಪೆರಂಪಳ್ಳಿ , ಬಿಜೆಪಿ ಪ್ರಮುಖರಾದ ಮಹೇಶ್ ಠಾಕೂರ್ , ಸುವರ್ಧನ್ ನಾಯಕ್ ಉಪಸ್ಥಿತರಿದ್ದರು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…