ಉಡುಪಿ: ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.
ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ. ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಎಂದು ಒತ್ತಾಯಿಸಿದ್ದಾರೆ. ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು ಎಂದು ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…