ಉಡುಪಿ: ಹಸುವಿನ ಮೈ ಮೇಲಿನ ಉಣ್ಣೆಗಳನ್ನು ನಿವಾರಣೆ ಮಾಡುವ ವಿಷದ ಬಾಟಲನ್ನು ನಾಗರಹಾವು ನುಂಗಿದ ಘಟನೆ ಉಡುಪಿಯ ನೀರೆ ಬೈಲೂರಿನಲ್ಲಿ ನಡೆದಿದೆ. ಸ್ಥಳೀಯ ಜಗದೀಶ್ ಎಂಬವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಗೆ ಕರೆ ಮಾಡಿ ಮಾಹಿತಿ ನೀಡಿದರು. ಅದರಂತೆ ಗುರುರಾಜ್ ಸನಿಲ್ ಅವರು ಗೆಳೆಯರೊಂಗಿದೆ ತೆರಳಿ ಹಾವನ್ನು ಹಿಡಿದು ವಿಷದ ಬಾಟಲ್ ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.
ಹಾವಿನ ರಕ್ಷಣೆಗೆ ಸ್ಥಳೀಯರು, ಉರಗ ತಜ್ಞರು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯ ಜಗದೀಶ್ ಹಾಗೂ ಅವರ ಗೆಳೆಯ ಸುಜಿತ್ ಎಂಬವರು ಹಾವು ಅವಿತಿದ್ದ ಶೌಚಾಲಯದ ನೆಲವನ್ನು ಪೂರ್ಣ ಒಡೆದು ಕೊನೆಗೆ ಅದರ ಅಡಿಪಾಯದ ಕಲ್ಲುಗಳನ್ನು ಕಿತ್ತು ತೆಗೆದಿದ್ದಾರೆ. ಗುರುರಾಜ್ ಹಾವನ್ನು ಹೊರಗೆ ತರುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಹಿಡಿದು ಪೂರ್ತಿ ಹೊಟ್ಟೆ ಸೇರಿದ್ದ ವಿಷದ ಬಾಟಲಿಯನ್ನು ಬಹಳ ಜಾಗರೂಕತೆಯಿಂದ ತಳ್ಳುತ್ತಾ ಹೊರ ತೆಗೆದಿದ್ದಾರೆ. ನೀರೆ ಗ್ರಾಮದ ರಿತೇಶ್ ಎಂಬವರು ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಸ್ಥಳೀಯರ ವಿನಂತಿ ಮೇರೆಗೆ ಹಾವನ್ನು ನೀರೆ ಬೈಲೂರು ಸಮೀಪ ಕಾಡಿಗೆ ಬಿಡಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…