ಬಂಟ್ವಾಳ: MDMA ನಿದ್ರಾಜನಕ ಮಾದಕ ವಸ್ತುಗಳ ಮಾರಾಟ ಮಾಡಲು ಬೈಕಿನಲ್ಲಿ ರೈಡ್ ಮಾಡುತ್ತಿದ್ದ ಮೂವರ ಪೈಕಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದ್ದು ಇನ್ನೋರ್ವ ಪರಾರಿಯಾಗಿರುವ ಘಟನೆ ನಡೆದಿದೆ.
ಮಂಚಿ ಗ್ರಾಮದ ಅಬ್ದುಲ್ ರಹೀಜ್ (23) ಸಹಸವಾರ ಮಂಚಿ ನಿವಾಸಿ ದಾವುದುಲ್ ಅಮೀರ್ (26) ಬಂಧಿತರಾಗಿದ್ದು ಇನ್ನೋರ್ವ ಸಹಸವಾರ ಬಂಟ್ವಾಳ ನಿವಾಸಿ ನಝೀರ್ ಎಂಬಾತ ಪರಾರಿಯಾಗಿದ್ದಾನೆ , ಈತನ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬಂಧಿತರ ಕೈಯಿಂದ ಸುಮಾರು 4 ಸಾವಿರ ರೂ ಮೌಲ್ಯದ 4 ಗ್ರಾಂ 04 ಮಿ.ಗ್ರಾಂ ತೂಕದ ನಿದ್ರಾಜನಕ MDMA ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರ ಠಾಣಾ ಎಸ್.ಐ.ಅವರು ಬ್ರಹ್ಮರಕೋಟ್ಲು ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವ ವೇಳೆ ನಂಬರ್ ಪ್ಲೇಟ್ ಇಲ್ಲದೆ ತ್ರಿಬಲ್ ರೈಡಿನಲ್ಲಿ ಬರುತ್ತಿದ್ದ ದ್ಬಿಚಕ್ರವಾಹನವೊಂದನ್ನು ನಿಲ್ಲಿಸಿ ಎಂದು ಸೂಚನೆ ನೀಡಿದಾಗ ಅದರಲ್ಲಿ ಓರ್ವ ಹಾರಿ ಪರಾರಿಯಾಗಿದ್ದ.
ಈ ಸಂದರ್ಭದಲ್ಲಿ ಸಂಶಯಗೊಂಡ ಎಸ್.ಐ. ಉಳಿದ ಇಬ್ಬರನ್ನು ವಿಚಾರಣೆ ನಡೆಸಿ ದಾಗ ಇವರು ನಿದ್ರಾಜನಕ ಮಾದಕವಸ್ತು ವನ್ನು ಸೇವನೆ ಮಾಡಿರುವುದು ಗಮನಕ್ಕೆ ಬಂದಿದೆ. ವಾಹನ ತಪಾಸಣೆ ನಡೆಸಿದಾಗ ಅದರಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಇರಿಸಲಾಗಿದ್ದ ಮಾದಕವಸ್ತು ಕಂಡು ಬಂದಿದ್ದು ,ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…