ಉಡುಪಿ: ದೊಡ್ಡ ಪ್ರಮಾಣದ ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಉಡುಪಿ ನೋಂದಣಿ ಕಚೇರಿಗೆ ದಾಳಿ ನಡೆಸಿ ಸರ್ಚ್ ವಾರೆಂಟ್‌ನೊಂದಿಗೆ ತನಿಖೆ ನಡೆಸಲಾಯಿತು.
ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಉಡುಪಿ ಜಿಲ್ಲೆಗೆ ನೀಡಿದ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ ವಕೀಲರೊಂದಿಗೆ ನಡೆಸಿದ ಸಂವಾದ ವೇಳೆ ಉಡುಪಿಯ ನೊಂದಣಿ ಕಚೇರಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ದೂರು ಬಂದಿತ್ತು. ಅಲ್ಲದೆ, ಸಂವಾದದ ವೇಳೆ ವಕೀಲರ ಸಂಘದ ಹಲವರು ಮಂದಿ ನೋಂದಣಿ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನ್ಯಾಯಮೂರ್ತಿ ಕೆ. ಎನ್.ಫಣೀಂದ್ರರ ಗಮನ ಸೆಳೆದಿದ್ದರು.
ಉಪಲೋಕಾಯುಕ್ತರು ಒಂದೇ ದಿನದಲ್ಲಿ ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರಂಟ್ ಹೊರಡಿಸಿದ್ದು, ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತದ ಎಸ್ಪಿ ಅವರಿಗೆ ಆದೇಶಿಸಿದ್ದರು.
ಮಂಗಳೂರಿನ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಆದರೆ ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರ, ಭ್ರಷ್ಟಾಚಾರದ ಪುರಾವೆ ತಂಡ ದೊರೆಯಲಿಲ್ಲ ಎನ್ನಲಾಗಿದೆ.
ಲೋಕಾಯುಕ್ತ ಎಸ್ಪಿ ತಂಡದ ತನಿಖೆ ಹಾಗೂ ಪರಿಶೀಲನೆಯ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…